ಹೊಸದಿಗಂತ ಡಿಜಿಟಲ್ ಡೆಸ್ಕ್:
ಟ್ರೈನಿ ಡಾಕ್ಟರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ, ಪ್ರತಿಭಟನೆ ನಡೆಯುತ್ತಿರುವಂತೆಯೇ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ.
ಘಟನೆ ನಡೆದಿದ್ದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್ ಸತತ ಎರಡನೇ ದಿನವೂ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ನಗರದ ಸಿಬಿಐನ ಕಚೇರಿಯಲ್ಲಿ ಶುಕ್ರವಾರ ರಾತ್ರಿ 9-30ಕ್ಕೆ ಆರಂಭವಾದ ವಿಚಾರಣೆ ಶನಿವಾರ ಮುಂಜಾನೆ 3 ಗಂಟೆಯವರೆಗೂ ಮುಂದುವರೆದಿದೆ. ಎರಡನೇ ಸುತ್ತಿನ ವಿಚಾರಣೆಗಾಗಿ ಇಂದು ಬೆಳಗ್ಗೆ 10-30ರ ಸುಮಾರಿಗೆ ಘೋಷ್ ಸಿಬಿಐ ಕಚೇರಿ ತಲುಪಿದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮೊದಲ ಸುತ್ತಿನ ವಿಚಾರಣೆಯ ಸಮಯದಲ್ಲಿ ವೈದ್ಯೆಯ ಸಾವಿನ ಸುದ್ದಿ ತಿಳಿದ ನಂತರ ಅವರ ಮೊದಲ ಪ್ರತಿಕ್ರಿಯೆಯ ಬಗ್ಗೆ ಮಾಜಿ ಪ್ರಾಂಶುಪಾಲರನ್ನು ಕೇಳಲಾಯಿತು. ಅವರ ಕುಟುಂಬಕ್ಕೆ ಮಾಹಿತಿ ತಿಳಿಸಲು ಯಾರಿಗೆ ತಿಳಿಸಲಾಯಿತು, ಹೇಗೆ ಮತ್ತು ಪೊಲೀಸರನ್ನು ಸಂಪರ್ಕಿಸಿದ್ದು ಯಾರು ಎಂಬ ಪ್ರಶ್ನೆಗಳನ್ನು ಕೇಳಲಾಯಿತು. ಕೆಲವು ಉತ್ತರಗಳು ಗೊಂದಲಕಾರಿಯಾಗಿದ್ದವು ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.