ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಂಜಯ್ ರಾಯ್‌ನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಸಿಬಿಐ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ವಿಚಾರಣೆಯನ್ನು ತೀವ್ರಗೊಳಿಸಿದೆ. ಆರೋಪಿ ಸಂಜಯ್ ರಾಯ್ ವಿರುದ್ಧ ಹೊಸ ಹೊಸ ಆರೋಪಗಳು ಕೇಳಿ ಬರುತ್ತಿದ್ದು, ಈ ಅಂಶಗಳನ್ನು ಸಿಬಿಐ ಪರಿಗಣಿಸಿದೆ ಎಂದು ವರದಿಯಾಗಿದೆ.
ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳು ಹೆಚ್ಚುತ್ತಿದ್ದು, ಸುಪ್ರೀಂ ಕೋರ್ಟ್ ಮನವಿ ಹೊರತಾಗಿಯೂ ವೈದ್ಯರು ನ್ಯಾಯಾಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಲ್ಲದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹ ಕೇಳಿ ಬರುತ್ತಿದೆ.