ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು CBI ಕೋಲ್ಕತ್ತಾ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.
ನ್ಯಾ. ತೀರ್ಥಂಕರ ಘೋಷ್ ಅವರು, ಅತ್ಯಾಚಾರ ಪ್ರಕರಣದಲ್ಲಿ ಒಬ್ಬರು ಅಥವಾ ಹೆಚ್ಚಿನವರು ಭಾಗಿಯಾಗಿದ್ದಾರೆಯೇ ಎಂದು ತನಿಖೆ ಮಾಡಲು ಸಿಬಿಐಗೆ ಸೂಚಿಸಿದ್ದರು. ಇದೀಗ ಹೈಕೋರ್ಟ್‌ಗೆ ವರದಿ ಸಲ್ಲಿಸಿದ ಸಿಬಿಐ, ಟ್ರೈನಿ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ತಿಳಿಸಿದೆ.
ಈ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಕೋರ್ಟ್ ಈ ಹಿಂದೆಯೇ ಜೀವಾವಧಿ ಶಿಕ್ಷೆ ವಿಧಿಸಿದೆ. ಮೃತ ವೈದ್ಯೆಯ ಪೋಷಕರು, ಸಿಬಿಐಯು ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿಲ್ಲ. ಸರಿಯಾಗಿ ತನಿಖೆ ಮಾಡಿದ್ದರೆ, ಇನ್ನೂ ಹಲವರ ಬಂಧನವಾಗಿ ಶಿಕ್ಷೆಯಾಗುತ್ತಿತ್ತು ಎಂದು ಆರೋಪಿಸಿದ್ದಾರೆ.