ಕೊಲ್ಕತ್ತಾ ಟ್ರೈನಿ ವೈದ್ಯೆ ರೇಪ್‌ & ಮರ್ಡರ್‌: ಇಂದು ನ್ಯಾಯಾಲಯದಿಂದ ಅಪರಾಧಿಗೆ ಶಿಕ್ಷೆ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರ್ಕಾರಿ ಸ್ವಾಮ್ಯದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದಲ್ಲಿ ಸಂಜಯ್ ರಾಯ್ ದೋಷಿ ಎಂದು ಸಾಬೀತಾಗಿದ್ದು ನ್ಯಾಯಾಲಯ ಇಂದು ಅಪರಾಹ್ನ ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ.

ರಾಯ್‌ಗೆ ಕನಿಷ್ಠ ಜೀವಾವಧಿ ಶಿಕ್ಷೆ ವಿಧಿಸಬಹುದಾದರೆ, ಗರಿಷ್ಠ ಶಿಕ್ಷೆಯು ಮರಣದಂಡನೆಯಾಗಿರಬಹುದು. ಕಳೆದ ವರ್ಷ ಆಗಸ್ಟ್ 9 ರಂದು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಪ್ರಕರಣದಲ್ಲಿ ರಾಯ್ ತಪ್ಪಿತಸ್ಥ ಎಂದು ಸೀಲ್ಡಾದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಕಳೆದ ಶನಿವಾರ ಘೋಷಿಸಿದ್ದರು.

ಈ ಕೃತ್ಯವು ದೇಶಾದ್ಯಂತ ಭಾರೀ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ವರ್ಷ ಆಗಸ್ಟ್ 9ರಂದು 31 ವರ್ಷದ ವೈದ್ಯೆಯ ಶವ ಆಸ್ಪತ್ರೆಯ ಸೆಮಿನಾರ್ ಕೋಣೆಯಲ್ಲಿ ಪತ್ತೆಯಾದ ನಂತರ ಆಗಸ್ಟ್ 10 ರಂದು ಕೋಲ್ಕತ್ತಾ ಪೊಲೀಸರ ಮಾಜಿ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ನನ್ನು ಬಂಧಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!