ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸುವುದು ಅಕ್ಷಮ್ಯ ಅಪರಾಧ: ಯಡಿಯೂರಪ್ಪ

ಹೊಸದಿಗಂತ ವರದಿ, ಶಿವಮೊಗ್ಗ:

ಯಾವುದೇ ಪೊಲೀಸ್ ಠಾಣೆಗೆ ನುಗ್ಗಿ ದಾಂದಲೆ ನಡೆಸುವುದು ಅಕ್ಷಮ್ಯ ಅಪರಾಧ. ಯಾವುದೇ ಕಾರಣಕ್ಕೂ ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, ಮುಖ್ಯಮಂತ್ರಿಗಳು ಈಗಾಗಲೇ ಬಿಗಿ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಮತ್ತು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಹಲ್ಲೆ ನಡೆಸಲಾಗುತ್ತಿದೆ. ಪೊಲೀಸ್ ಠಾಣೆಗೆ ನುಗ್ಗುತ್ತಾರೆ ಎಂದರೆ ಈ ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕೆ ತಲುಪಿದೆ ಎಂಬುದು ಗೊತ್ತಾಗುತ್ತದೆ. ಹುಬ್ಬಳ್ಳಿಯಲ್ಲಿ ನಿರ್ಮಾಣ ಆಗಿರುವ ಅಶಾಂತ ವಾತಾವರಣದ ಹಿಂದೆ ಷಡ್ಯಂತ್ರವಿದೆ ಎಂದು ಶಂಕೆ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!