ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಕೋಲ್ಕತ್ತಾ: ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೋಲ್ಕತ್ತಾ ನೈಟ್​ ರೈಡರ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆಡಿರುವ 6 ಪಂದ್ಯಗಳಲ್ಲಿ ತಲಾ ಮೂರು ಗೆಲುವು ಮತ್ತು ಸೋಲು ಕಂಡಿರುವ ಕೆಕೆಆರ್ ಈ ಪಂದ್ಯದಲ್ಲಿ ಗೆದ್ದು ಮತ್ತೆ ಗೆಲುವಿನ ಹಳಿಗೆ ಮರಳುವ ಆಲೋಚನೆಯಲ್ಲಿದ್ದು, ಅಮನ್ ಖಾನ್ ಬದಲಿಗೆ ಯುವ ವೇಗಿ ಶಿವಂ ಮಾವಿಗೆ ಅವಕಾಶ ನೀಡಿದೆ.
ಇತ್ತ ರಾಜಸ್ಥಾನ್ ರಾಯಲ್ಸ್ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ವೇಗಿ ಬೌಲ್ಟ್​, ಕರುಣ್ ನಾಯರ್ ಮತ್ತು ಒಬೆಡ್ ಮೆಕಾಯ್ ಅವರು ನೀಶಮ್, ಕುಲದೀಪ್​ ಸೇನ್ ಮತ್ತು ರಾಸಿ ವ್ಯಾನ್ ಡರ್ ಡಸೆನ್ ಬದಲಿಗೆ ಕಣಕ್ಕಿಳಿದಿದ್ದಾರೆ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ/ವಿಕೀ), ಕರುಣ್ ನಾಯರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಾಹಲ್

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ವೆಂಕಟೇಶ್ ಅಯ್ಯರ್, ಆರೋನ್ ಫಿಂಚ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್ (ವಿಕೀ), ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!