ಹೊಸದಿಗಂತ ವರದಿ,ಪುತ್ತೂರು:
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮ ಪಂಚಾಯತ್‍ನಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಯ ಎಸ್.(38) ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಶೇಡಿಗುರಿ ನಿವಾಸಿಯಾದ ಅವರು ಬೆಳಗ್ಗೆ ಅಡುಗೆ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದುಕೊಂಡು ಪತ್ತೆಯಾಗಿದ್ದಾರೆ. ಕಳೆದ 15 ವರ್ಷಗಳಿಂದ ಗ್ರಾ.ಪಂ.ನಲ್ಲಿ ಸಿಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.