ಹೊಸದಿಗಂತ ಡಿಜಿಟಲ್ ಡೆಸ್ಕ್:
ಟ್ವಿಟರ್‌ಗೆ ಠಕ್ಕರ್ ಕೊಡೋದಕ್ಕೆ ಆರಂಭವಾಗಿದ್ದ ಸಾಮಾಜಿಕ ಜಾಲತಾಣ ಕೂ ಇದೀಗ ಶಾಶ್ವತವಾಗಿ ಬಾಗಿಲು ಮುಚ್ಚಿದೆ.
ದೇಶೀಯ ಸಾಮಾಜಿಕ ಜಾಲತಾಣ ವೇದಿಕೆ ಕೂ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಅಧಿಕೃತವಾಗಿ ಪ್ರಕಟಿಸಿದೆ. ಸ್ವಾಧೀನ ಮಾತುಕತೆ ವಿಫಲ ಮತ್ತು ಹೆಚ್ಚಿನ ತಂತ್ರಜ್ಞಾನದ ವೆಚ್ಚಗಳಿಂದ ಕೂ ವೇದಿಕೆಯನ್ನು ಮುಚ್ಚುವುದಾಗಿ ಸ್ಥಾಪಕರಾದ ಅಪ್ರಮೇಯ ರಾಧಾಕೃಷ್ಣಮತ್ತು ಮಯಾಂಕ್ ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಕೂ ಉತ್ತುಂಗದಲ್ಲಿದ್ದಾಗ ಸುಮಾರು 20 ಲಕ್ಷ ದೈನಂದಿನ ಸಕ್ರಿಯ ಬಳಕೆದಾರರನ್ನು ಮತ್ತು 9,000 ವಿಐಪಿಗಳನ್ನು ಒಳಗೊಂಡಂತೆ 1 ಕೋಟಿ ಮಾಸಿಕ ಬಳಕೆದಾರರನ್ನು ಹೊಂದಿತ್ತು. ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿ ಬಳಕೆದಾರರರನ್ನು ಪ್ರೋತ್ಸಾಹಿಸಲು ಮುಂದಾಗಿದ್ದರೂ ಕೂ ಬಳಕೆದಾರರನ್ನು ತಲುಪಲು ವಿಫಲವಾಗಿತ್ತು. ಇದೀಗ ಕೂ ಬಂದ್ ಆಗಿದ್ದು, ಇನ್ಮುಂದೆ ಈ ಹಳದಿ ಹಕ್ಕಿ ಸದ್ದು ಕೇಳಿಸೋದಿಲ್ಲ.