Tuesday, July 5, 2022

Latest Posts

ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ದುರ್ಮರಣ

ಹೊಸದಿಗಂತ ವರದಿ, ಕೊಪ್ಪಳ:
ಕುಷ್ಟಗಿ ಠಾಣಾ ವ್ಯಾಪ್ತಿಯ ಕುರುಬನಾಳ ಕ್ರಾಸ್ ಹತ್ತಿರ ಮಂಗಳವಾರ ಬೆಳಗ್ಗೆ 4.50 ರ ಸುಮಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಈ ಕುರಿತು ಕರೆಯೊಂದನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದಾಗ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದು ತಿಳಿದುಬಂದಿದೆ. ಡಿಕ್ಕಿಹೊಡೆದ ವಾಹನ ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಸಂಬಂಧ ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss