ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರೀಕ್ಷೆಯಂತೆ ಕೊಪ್ಪಳದ ಬಿಜೆಪಿ ಸಂಸದ ಕರಡಿ ಸಂಗಣ್ಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಧ್ವಜವನ್ನು ನೀಡಿ ಕರಡಿ ಸಂಗಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತಿಸಿದರು.
ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಮಾತನಾಡಿದ ಅವರು, ಇಂದು ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದೇನೆ. ಇವತ್ತು ನಾನು ಕಾಂಗ್ರೆಸ್ ಸೇರಲು ಸವದಿ ಕಾರಣ. ಸಿದ್ದರಾಮಯ್ಯ ಜೊತೆ ಕೆಲಸ ಮಾಡಿದ್ದೇನೆ. ಡಿಕೆ ಶಿವಕುಮಾರ್ ಪಕ್ಷೇತರರವಾಗಿ ಗೆದ್ದಾಗ ನಾನು ಗೆದ್ದಿದ್ದೆ ಎಂದು ಹೇಳಿದರು.
ಹೆಚ್‌ಜಿ. ರಾಮುಲು ನನ್ನ ರಾಜಕೀಯ ಗುರು. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟಪಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮ ಪಡುತ್ತೇನೆ ಎಂದರು.