ಹೊಸದಿಗಂತ ವರದಿ ಕೊಪ್ಪಳ:
ಹತ್ತು ವರ್ಷಗಳ ಹಿಂದೆ ನಡೆದಿದ್ದ ಜಾತಿ ಸಂಘರ್ಷ ಪ್ರಕರಣದಲ್ಲಿ ಅಪರಾಧಿಯಾಗಿದ್ದ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದ ರಾಮಣ್ಣ ಭೋವಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ರಾಮಣ್ಣ ಭೋವಿ ಅವರನ್ನು ಗುರುವಾರ ಜಿಲ್ಲಾ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಾಗ ಅಸ್ವಸ್ಥರಾಗಿದ್ದರು. ಅಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನ್ಯಾಯಾಲಯದ ಶಿಕ್ಷೆ ಆದೇಶ ಪ್ರಕಟವಾದ ಬಳಿಕ ರಾಮಣ್ಣ ಅವರನ್ನು ನ್ಯಾಯಾಲಯದಿಂದ ನೇರವಾಗಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.