ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪರಾರಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ಮತ್ತು ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಈ ಘಟನೆಯನ್ನು ಸಿಎಂ ಸಿದ್ಧರಾಮಯ್ಯ ಖಂಡಿಸಿದ್ದರು. ಅಲ್ಲದೇ ಸೂಕ್ತ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಪೊಲೀಸರು ಪರಾರಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ನಿನ್ನೆಯಷ್ಟೇ ಪೊಲೀಸರು ಮಲ್ಲೇಶ್, ಚೇತನ್, ಸಾಯಿ ಎಂಬಾತನನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಸಾಯಿರಾಮ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಗಂಗಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಬಲೆ ಬೀಸಿದ್ದಾರೆ.