ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲಾ ಪಂಚಾಯತ್ ಕೊಪ್ಪಳದಲ್ಲಿ 13 ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ಜುಲೈ 1,2023ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಆಗಸ್ಟ್ 16,2023ರೊಳಗೆ ಅರ್ಜಿ ಸಲ್ಲಿಸಬಹುದು.