ಹೊಸದಿಗಂತ ವರದಿ, ಉಡುಪಿ:
ರಾಜ್ಯ ಹಿಂದು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಸಚಿವ ಕೋಟ ಶ್ರೀನಿವಾಸ ಪೂಜಾರಿ, ‘ಕೋವಿಡ್-19 ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ’ ಎಂದಿದ್ದಾರೆ. ಸಚಿವ ಕೋಟ ಜ್ವರ ಹಿನ್ನೆಲೆಯಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಲು ಮನವಿ ಮಾಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಚುನಾವಣಾ ಪ್ರಚಾರದ ಪ್ರಯುಕ್ತ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೇರಳಕ್ಕೆ ಭೇಟಿ ನೀಡಿದ್ದರು. ಇದೀಗ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಕಳೆದ ಒಂದೆರಡು ದಿನಗಳಲ್ಲಿ ತನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಸೂಚಿಸಿದ್ದಾರೆ.
#COVID19 Positive ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ.@BJP4Karnataka @BjpMangaluru @BJP4Udupi
— Kota Shrinivas Poojari (@KotasBJP) April 10, 2021