Tuesday, July 5, 2022

Latest Posts

ಮತ್ತೊಮ್ಮೆ ಸರಳತೆ ಮೆರೆದ ಕೋಟ ಶ್ರೀನಿವಾಸ ಪೂಜಾರಿ: ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನದಲ್ಲಿ ತೆರಳಿದ ಮಾಜಿ ಸಚಿವರು!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಉಡುಪಿ:

ಯಡಿಯೂರಪ್ಪ ಸರಕಾರದಲ್ಲಿ ಹಿಂದು ಧಾರ್ಮಿಕ ದತ್ತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ.
ಸೋಮವಾರ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನದಲ್ಲಿ ತೆರಳಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಯವಾಗಿ ನಿರಾಕರಿಸಿದ ನಿಕಟಪೂರ್ವ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಯಡಿಯೂರಪ್ಪನವರು ರಾಜ್ಯದ ಬಡವರ ಬಂಧುವಾಗಿ ಆಡಳಿತ ನಡೆಸಿದ್ದರು ಎಂದು ಚುಟುಕಾಗಿ ಪ್ರತಿಕ್ರಿಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss