ಕೋಟಕ್ ಮಹೀಂದ್ರಾ ಬ್ಯಾಂಕ್ ಎಂಡಿ – ಸಿಇಒ ಉದಯ್ ಕೋಟಕ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಟಕ್ ಮಹೀಂದ್ರಾ ಬ್ಯಾಂಕ್ (Kotak Mahindra Bank )ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನಕ್ಕೆ ಉದಯ್ ಕೋಟಕ್ (Uday Kotak) ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಬ್ಯಾಂಕ್ ಪ್ರಕಟಣೆ ಹೊರಡಿಸಿದ್ದು, ಸೆಪ್ಟೆಂಬರ್ 1ರಿಂದಲೇ ಅವರು ಈ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ತಿಳಿಸಿದೆ. ಆದಾಗ್ಯೂ, ಕೋಟಕ್ ಅವರು ಬ್ಯಾಂಕ್‌ನ ನಾನ್ ಎಕ್ಸಿಕ್ಯೂಟಿವ್ ನಿರ್ದೇಶಕರಾಗಿ ಮುಂದುವರಿಯುತ್ತಾರೆ ಎಂದು ಹೇಳಿದೆ.

ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಉದಯ್ ಕೋಟಕ್ ಅವರ ಅಧಿಕಾರಾವಧಿಯು ಡಿಸೆಂಬರ್ 31, 2023 ರಂದು ಕೊನೆಗೊಳ್ಳುತ್ತದೆ. ಇದೀಗ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ದೀಪಕ್ ಗುಪ್ತಾ ಅವರು ಆರ್‌ಬಿಐ ಮತ್ತು ಬ್ಯಾಂಕ್ ಸದಸ್ಯರ ಅನುಮೋದನೆಗೆ ಒಳಪಟ್ಟು ಡಿಸೆಂಬರ್ 31 ರವರೆಗೆ ಎಂಡಿ ಮತ್ತು ಸಿಇಒ ಅವರ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ ಎಂದು ಹೇಳಿದೆ.

ಕೋಟಕ್ ಅವರು 1985 ರಲ್ಲಿ ಬ್ಯಾಂಕಿಂಗ್ ಅಲ್ಲದ ಹಣಕಾಸು ಸಂಸ್ಥೆಯಾಗಿ ಪ್ರಾರಂಭವಾದಾಗಿನಿಂದ ಬ್ಯಾಂಕನ್ನು ಮುನ್ನಡೆಸುತ್ತಿದ್ದರೆ. ಕೋಟಕ್ ಬ್ಯಾಂಕ್ 2003 ರಲ್ಲಿ ವಾಣಿಜ್ಯ ಸಾಲದಾತವಾಯಿತು , ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಕೋಟಕ್ ಅವರು ಸುಮಾರು $13.4 ಬಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!