ಮಡಿಕೇರಿಯಲ್ಲಿ ಗಮನಸೆಳೆದ ಕೋಟಿ ಕಂಠ ಗಾಯನ

ಹೊಸದಿಗಂತ ವರದಿ ಮಡಿಕೇರಿ:

ಜಿಲ್ಲಾಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳು, ಶಾಲಾ ಕಾಲೇಜುಗಳ ಸಹಯೋಗದಲ್ಲಿ ಶುಕ್ರವಾರ ಜಿಲ್ಲೆಯ ವಿವಿಧೆಡೆ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. 67 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ‌ನಗರದ ರಾಜಾಸೀಟ್’ನಲ್ಲಿ ನಡೆದ ‘ಕೋಟಿ ಕಂಠ ಗಾಯನ’ ಪ್ರಧಾನ ಕಾರ್ಯಕ್ರಮ ಗಮನ ಸೆಳೆಯಿತು.

ಶಾಸಕರು, ಗಣ್ಯರು, ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಇತರರು ಪಾಲ್ಗೊಂಡಿದ್ದರು. ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ, ವಿವಿಧ ಶಾಲಾ-ಕಾಲೇಜುಗಳು, ಕಚೇರಿಗಳು, ಸಂಘ ಸಂಸ್ಥೆಗಳು ಹಾಗೂ ಪ್ರಮುಖ ಸ್ಥಳಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಏಕಕಾಲದಲ್ಲಿ ನಡೆಯಿತು. ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ನಾಡಗೀತೆಯಾದ ‘ಜಯ ಭಾರತ ಜನನಿಯ ತನುಜಾತೆ’, ಹುಯಿಲಗೋಳ ನಾರಾಯಣರಾಯರು ರಚಿಸಿರುವ ‘ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು’, ಕುವೆಂಪು ಅವರು ಬರೆದಿರುವ ‘ಬಾರಿಸು ಕನ್ನಡ ಡಿಂಡಿಮವ’, ಡಾ.ಡಿ.ಎಸ್.ಕರ್ಕಿ ಅವರು ಬರೆದಿರುವ ‘ಹಚ್ಚೇವು ಕನ್ನಡದ ದೀಪ’, ನಾಡೋಜ ಡಾ.ಚೆನ್ನವೀರ ಕಣವಿ ಅವರು ಬರೆದಿರುವ ‘ವಿಶ್ವ ವಿನೂತನ ವಿದ್ಯಾಚೇತನ’, ಡಾ.ಹಂಸಲೇಖ ಅವರು ಬರೆದಿರುವ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಈ ಹಾಡುಗಳನ್ನು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಹಾಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!