6-12 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್, 5- 12 ವರ್ಷದ ಮಕ್ಕಳಿಗೆ ಕಾರ್ಬೆವಾಕ್ಸ್ ವ್ಯಾಕ್ಸೀನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊರೋನಾ ಮತ್ತೆ ದೇಶದಲ್ಲಿ ಹೆಚ್ಚುತ್ತಿದ್ದು, ಇದರ ನಡುವೆಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡಲು ಡ್ರಗ್ಸ್ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ(ಡಿಸಿಜಿಐ) ಒಪ್ಪಿಗೆ ನೀಡಿದೆ.
ಈ ಮೂಲಕ ಇನ್ನು 6ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್​ ಹಾಗೂ 5ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ​​ ನೀಡಬಹುದಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮಾಹಿತಿ ನೀಡಿದ್ದಾರೆ.

ಕಳೆದ ಡಿಸೆಂಬರ್​ ತಿಂಗಳಲ್ಲಿ 12ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ತುರ್ತು ಅನುಮತಿಸಿದ್ದ ಡಿಸಿಜಿಐ, 5 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ ನೀಡಲು ಅವಕಾಶ ನೀಡಿತ್ತು.
ಇನ್ನು ವ್ಯಾಕ್ಸಿನ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಸಹ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ್ ಬಯೋಟೆಕ್​ನ ಕೊವ್ಯಾಕ್ಸಿನ್​​ ಲಸಿಕೆಯನ್ನು ಮಕ್ಕಳಿಗೆ ನೀಡಲು ಡಿಸಿಜಿಐ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!