ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
2 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗಕ್ಕಾಗಿ ಮಕ್ಕಳನ್ನು ಸ್ಕ್ರೀನಿಂಗ್ ಮಾಡಲು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆರಂಭಿಸಿದೆ.
ಏಮ್ಸ್ ಪಟನಾದ ಶಾಖೆಯಲ್ಲಿ ಮಕ್ಕಳ ಮೇಲೆ ಲಸಿಕೆಯ ಪ್ರಯೋಗ ಆರಂಭಗೊಂಡಿದ್ದು, ಭಾರತ್ ಬಯೋಟೆಕ್ ದೇಶೀಯವಾಗಿ ಅಭಿವೃದ್ಧಿಪಡಿಸಿದ ಈ ಲಸಿಕೆ ಮಕ್ಕಳಿಗೆ ಸೂಕ್ತವಾಗಿದೆಯೇ ಎಂದು ಪರೀಕ್ಷಿಸಲಾಗುತ್ತಿದೆ.
ಆರೋಗ್ಯಯುತವಾದ 525 ಅಭ್ಯರ್ಥಿಗಳ ಮೇಲೆ ಈ ಪ್ರಯೋಗ ಮಾಡಲಾಗುವುದು. ಲಸಿಕೆಯ ಎರಡು ಡೋಸ್ಗಳನ್ನು ಕ್ರಮವಾಗಿ ಮೊದಲನೇ ಹಾಗೂ 28ನೇ ದಿನ ನೀಡಲಾಗುವುದು.
2-18 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಲಸಿಕೆಯ ಪ್ರಯೋಗವನ್ನು ಮಕ್ಕಳಲ್ಲಿ ಮಾಡಲು ಭಾರತೀಯ ಮದ್ದು ನಿಯಂತ್ರಣ ಪ್ರಾಧಿಕಾರ ಮೇ 12ರಂದು ಅನುಮತಿ ಕೊಟ್ಟಿದೆ.