ಕೊಡಗು ಜಿಲ್ಲೆಯಲ್ಲಿ ಸೋಮವಾರ 402 ಮಂದಿಗೆ ಕೋವಿಡ್ ದೃಢ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಸೋಮವಾರ 402 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ‌ ಕೊರೋನಾ‌ ಸೋಂಕಿತರ ಒಟ್ಟು ಸಂಖ್ಯೆ 44,279ರಷ್ಟಾಗಿದೆ.
ಕಳೆದ‌ 24ಗಂಟೆಗಳಲ್ಲಿ 185 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 39,645ಕ್ಕೆಏರಿಕೆಯಾಗಿದೆ.ಅಲ್ಲದೆ ಇದುವರೆಗೆ ಒಟ್ಟು 442 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ ‌4194 ಸಕ್ರಿಯ ಪ್ರಕರಣಗಳಿದ್ದು, 268 ಕಂಟೈನ್ ಮೆಂಟ್ ವಲಯಗಳು ಹಾಗೂ ಪಾಸಿಟಿವಿಟಿ ದರ ಶೇ.24.05ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!