spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಡೆಲ್ಟಾ ವೇರಿಯಂಟ್ ತಳಿ ಪತ್ತೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ‌ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಕೋವಿಡ್ ಡೆಲ್ಟಾ ವೇರಿಯೆಂಟ್ ತಳಿ ಪತ್ತೆಯಾಗುವ ಮೂಲಕ ಆತಂಕ ಸೃಷ್ಟಿಸಿದೆ.
ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ರೂಪಾಂತರಿಯಾದ ಮಹಾಮಾರಿ ಕೋವಿಡ್ ಡೆಲ್ಟಾ ವೇರಿಯಂಟ್ ನ 19 ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾ‌ ಆರೋಗ್ಯಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 67 ಮಾದರಿಗಳನ್ನು ಸಂಗ್ರಹಿಸಿ,ನಿಮ್ಹಾನ್ಸ್ ಗೆ ಕಳುಹಿಸಲಾಗಿದ್ದು, ಈ ಪೈಕಿ 19 ಮಂದಿಯಲ್ಲಿ ಡೆಲ್ಟಾ ವೇರಿಯಂಟ್ ಇರುವುದು ದೃಢವಾಗಿದೆ. ಈಗಾಗಲೇ ಆರೋಗ್ಯ ಇಲಾಖೆಯ ಬಳಿ ಎಲ್ಲರ ಸಂಪರ್ಕ ಇರುವುದರಿಂದ ಕೂಡಲೇ ಪತ್ತೆ ಹಚ್ಚಲಾಗುವುದು. ಅವರ ಆರೋಗ್ಯದ ಮೇಲೆ ನಿಗಾ ಇರಿಸಿ ಚಿಕಿತ್ಸೆ ಕೊಡಲಾಗುವುದು ಎಂದು ಆರೋಗ್ಯಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು, ಇಲ್ಲದೇ ಹೋದ್ರೆ ಡೆಲ್ಟಾ ವೇರಿಯಂಟ್ ಪ್ರಕರಣಗಳು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss