ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಇಬ್ಬರಿಗೆ ಕೋವಿಡ್ ಸೋಂಕು

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
16 ಮಂದಿ ಸೋಂಕು ಮುಕ್ತರಾಗಿದ್ದಾರೆ. ಬುಧವಾರ ಕೊರೋನಾದಿಂದ ಯಾವುದೇ ಸಾವು ಸಂಭವಿಸಿಲ್ಲ. ಪಾಸಿಟಿವಿಟಿ ದರ ಶೇ.0.07 ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 135409ಕ್ಕೆ ಏರಿಕೆಯಾಗಿದೆ. ಈ ಪೈಕಿ 78 ಸಕ್ರಿಯ ಪ್ರಕರಣಗಳು. 133484 ಮಂದಿ ಗುಣಮುಖರಾಗಿದ್ದಾರೆ. 1847 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!