ಹೊಸದಿಗಂತ ವರದಿ,ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ (ಫೆ.22) 20 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 63 ಮಂದಿ ಮಂಗಳವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,253 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಮಂಗಳವಾರ ಮೂರು ಸಾವು ಸಂಭವಿಸಿದೆ. ಒಬ್ಬರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,843 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 225 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.57ಕ್ಕೆ ಇಳಿದಿದೆ.