ಕೊಡಗು ಜಿಲ್ಲೆಯಲ್ಲಿ 389 ಮಂದಿಗೆ ಕೋವಿಡ್ ದೃಢ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 389 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಹಾಗೂ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ‌134, ಸೋಮವಾರಪೇಟೆ ತಾಲೂಕಿನಲ್ಲಿ182 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 73 ಪ್ರಕರಣಗಳು ವರದಿಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. 9.16ರಷ್ಟಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 40687ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 374 ಮಂದಿ ಗುಣಮುಖರಾಗಿದ್ದಾರೆ. ಅಲ್ಲದೆ ಒಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಇದುವರೆಗೆ ಒಟ್ಟು 37037ಮಂದಿ ಸೋಂಕು ಮುಕ್ತರಾದಂತಾಗಿದ್ದು, 440ಮಂದಿ ಸಾವಿಗೀಡಾದಂತಾಗಿದೆ.
ಜಿಲ್ಲೆಯಲ್ಲಿ‌ ಪ್ರಸಕ್ತ 3210ಸಕ್ರಿಯ ಪ್ರಕರಣಗಳು ಹಾಗೂ 239 ಕಂಟೈನ್ ಮೆಂಟ್ ವಲಯಗಳು ಇರುವುದಾಗಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!