Saturday, July 2, 2022

Latest Posts

ಕೋವಿಡ್‌ನ ಈ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದು ಒಳಿತಲ್ಲ: ಪೇಜಾವರ ಶ್ರೀ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………

ಹೊಸದಿಗಂತ ವರದಿ, ಉಡುಪಿ:

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಜೋರಾಗಿದೆ. ಆದರೆ ಕೋವಿಡ್‌ನ ಈ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವುದು ಒಳಿತಲ್ಲ ಎಂದು ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಪೇಜಾವರ ಶ್ರೀಗಳು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಈಗ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ಅಲ್ಲಿ ಏನು ಚರ್ಚೆಯಾಗಿದೆ ಎಂಬ ಮಾಹಿತಿ ನಮಗೆ ಇಲ್ಲ. ಆ ಕುರಿತಾಗಿ ನಾವು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ಈ ಹಂತದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸೂಕ್ತವಲ್ಲ ಅನ್ನುವುದು ನಮ್ಮ ವೈಯಕ್ತಿಕ ಅಭಿಪ್ರಾಯ. ರಾಜ್ಯದಲ್ಲಿ ಪಕ್ಷ ಕಟ್ಟಿದ ರೀತಿ, ನಂತರ ಅವರ ಓಡಾಟ ಎಲ್ಲವನ್ನೂ ಗಮನಿಸಿ ಈ ಹೇಳಿಕೆ ನೀಡುತ್ತಿದ್ದೇವೆ ಎಂದು ಪೇಜಾವರಶ್ರೀ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss