Saturday, August 13, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 957 ಮಂದಿಯಲ್ಲಿ ಕೋವಿಡ್, 1638 ಮಂದಿ ಸೋಂಕಿನಿಂದ ಮುಕ್ತ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………..

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 1638 ಮಂದಿ ಕೊರೋನಾ ಸೋಂಕಿನಿಂದ ಮುಕ್ತರಾಗಿದ್ದಾರೆ.
ಭಾನುವಾರ 957 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದ್ದು, ಏಳು ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 64314 ಕ್ಕೆ ಏರಿಕೆಯಾಗಿದೆ. ಈ ಪೈಕಿ 12506 ಸಕ್ರಿಯ ಪ್ರಕರಣಗಳು. 50993 ಮಂದಿ ಗುಣಮುಖರಾಗಿದ್ದಾರೆ. 815 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 54686 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 5710930 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss