Wednesday, August 10, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 195 ಮಂದಿಯಲ್ಲಿ ಕೋವಿಡ್ ಪಾಸಿಟಿವ್, 7 ಸೋಂಕಿತರು ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 195 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
೩೦೮ ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಭಾನುವಾರ 7ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಭಾನುವಾರ ಶೇ. 2.59 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 95424 ಕ್ಕೆ ಏರಿಕೆಯಾಗಿದೆ. ಈ ಪೈಕಿ 2175  ಸಕ್ರಿಯ ಪ್ರಕರಣಗಳು. 91934  ಸೋಂಕಿತರು ಗುಣಮುಖರಾಗಿದ್ದಾರೆ. 1315  ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 79880  ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 9745817  ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss