ಹೊಸದಿಗಂತ ವರದಿ, ವಿಜಯಪುರ:
ವಿಜಯಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಪ್ರಕರಣ ಹೆಚ್ಚಳಗೊಳ್ಳುತ್ತಿದ್ದು, ಜಿಲ್ಲಾ ಪೊಲೀಸ್ ಇಲಾಖೆಯ 31 ಸಿಬ್ಬಂದಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಆದರೆ, ಪೊಲೀಸ್ ಸಿಬ್ಬಂದಿಗಳಿಗೆ ಸೋಂಕಿನಿಂದಾಗಿ ಹೆಚ್ಚಿನ ಸಮಸ್ಯೆ ಆಗಿಲ್ಲ. ಎಲ್ಲರೂ ಆರೋಗ್ಯವಾಗಿ ಇದ್ದಾರೆ. ಅಲ್ಲದೇ, ಪೊಲೀಸ್ ಇಲಾಖೆಯಿಂದ ಮಾಸ್ಕ್, ಸ್ಯಾನಿಟೈಜರ್ ಹಂಚಿಕೆ ಮಾಡಲಾಗಿದೆ. ಅದಕ್ಕಾಗಿ ಕೋವಿಡ್ ಒಳಗಾಗಿರುವ ಸಿಬ್ಬಂದಿಗಳು ಭಯ ಪಡಬಾರದು. ಪೊಲೀಸ್ ಇಲಾಖೆ ನಿಮ್ಮೊಂದಿಗೆ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ತಿಳಿಸಿದ್ದಾರೆ.