Sunday, August 14, 2022

Latest Posts

ಕೋವಿಡ್ ಮೂರನೇ ಅಲೆ ಎದುರಿಸಲು ಸಚಿವ ಈಶ್ವರಪ್ಪ ನೇತೃತ್ವದಲ್ಲಿ ನಡೆಯಿತು ವಿಶೇಷ ಸಭೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಶಿವಮೊಗ್ಗ :

ತಜ್ಞರು ಅಕ್ಟೋಬರ್ ತಿಂಗಳಲ್ಲಿ ಕೋವಿಡ್ ಮೂರನೇ ಅಲೆ ಬರುವ ಬಗ್ಗೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ಸೋಮವಾರ ಸಚಿವ ಈಶ್ವರಪ್ಪ ನೆತೃತ್ವದಲ್ಲಿ ಸಭೆಯಲ್ಲಿ ಚರ್ಚಿಸಲಾಯಿತು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತರ ಸಂಬಂಧಿಕರಿಗೆ ಯಾವುದೇ ಕಾರಣಕ್ಕೂ ವಾರ್ಡ್ ಒಳಗೆ ಪ್ರವೇಶಿಸಲು ಅವಕಾಶ ನೀಡಬಾರದು. ಕೋವಿಡ್ ಪೀಡಿತರ ಅಗತ್ಯಗಳನ್ನು ನೋಡಿಕೊಳ್ಳಲು ಬೇಕಾದ ಸಿಬ್ಬಂದಿಗಳನ್ನು ಸ್ಥಳೀಯವಾಗಿ ನೇಮಕ ಮಾಡಿಕೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದರು.
ಜಿಲ್ಲಾ ಕೋವಿಡ್ ನಿರ್ವಹಣಾ ತಜ್ಞ ಸಮಿತಿಯ ಸದಸ್ಯ ಡಾ.ಶ್ರೀಕಾಂತ್ ಹೆಗಡೆ ಅವರು ಮಾತನಾಡಿ, ಮೂರನೇ ಅಲೆಯನ್ನು ತಡೆಯಲು ಲಸಿಕೆ ನೀಡುವುದನ್ನು ತೀವ್ರಗೊಳಿಸುವುದು ಮಾತ್ರ ಏಕೈಕ ಮಾರ್ಗವಾಗಿದೆ. ಮೂರನೇ ಅಲೆ ತಾಲೂಕು ಹಾಗೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದ್ದು, ಅಲ್ಲಿ ವೈದ್ಯಕೀಯ ವ್ಯವಸ್ಥೆಯನ್ನು ಉತ್ತಮಪಡಿಸಬೇಕು. ಅಗತ್ಯ ಪ್ರಮಾಣದ ವೈದ್ಯರು, ನರ್ಸ್, ಸಿಬ್ಬಂದಿಗಳನ್ನು ನೇಮಕ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಲಸಿಕೆ ನೀಡುವ ಕಾರ್ಯವನ್ನು ತೀವ್ರಗೊಳಿಸಬೇಕು ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss