ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೈಜರ್ ಮತ್ತು ಬಯೋ ಎನ್ಕೆಟ್ ಕಂಪನಿಗಳು ಆರು ತಿಂಗಳಿಂದ ನಾಲ್ಕು ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ತುರ್ತು ಅನುಮತಿ ಕೋರಿ ಅರ್ಜಿ ಸಲ್ಲಿಸಿವೆ. ಅಮೆರಿಕದ ಫುಡ್ ಆಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ವಿನಂತಿ ಮೇರೆಗೆ ಇ ಕಂಪನಿಗಳು ಲಸಿಕೆ ಬಳಕೆಯ ತುರ್ತು ಅಧಿಕಾರ ಪಡೆಯಲು ಬೇಕಾದ ಪ್ರಕ್ರಿಯೆ ಆರಂಭಿಸಿವೆ. ಇದಕ್ಕೆ ದೃಢೀಕರಣ ಸಿಕ್ಕರೆ ಫೈಜರ್-ಬಯೋ ಎನ್ಟೆಕ್ ಲಸಿಕೆಯು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನೀಡಲು ಸಿದ್ಧವಾದ ಮೊದಲ ಕೋವಿಡ್ ಲಸಿಕೆ ಆಗಲಿದೆ.
ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದೆ. ಆದರೆ ಐದು ವರ್ಷದೊಳಗಿನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ನಿಂದ ಆಸ್ಪತ್ರೆ ಸೇರುತ್ತಿದ್ದಾರೆ. ವೈರಸ್ನಿಂದ ಮಕ್ಕಳನ್ನು ಕಾಪಾಡುವುದು ದೊಡ್ಡ ಸವಾಲಾಗಿದೆ. ಲಸಿಕೆಯ ತುರ್ತು ಅಗತ್ಯವಿದೆ. ಈ ಹಿನ್ನೆಲೆ ಲಸಿಕೆಗೆ ಅನುಮತಿ ಪಡೆದುಕೊಳ್ಳಲಿದ್ದೇವೆ ಎಂದು ಫೈಜರ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಲ್ಬರ್ಟ್ ಬೌರ್ಲಾ ಹೇಳಿದ್ದಾರೆ.