Thursday, August 18, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 1175 ಮಂದಿಗೆ ಕೋವಿಡ್ ಸೋಂಕು, 5 ಸೋಂಕಿತರು ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ದಾಖಲೆಯ 1175 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಕೊರೋನಾದಿಂದ ಐವರು ಮೃತಪಟ್ಟಿದ್ದಾರೆ.
985 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 57551 ಕ್ಕೆ ಏರಿಕೆಯಾಗಿದೆ. ಈ ಪೈಕಿ 12742 ಸಕ್ರಿಯ ಪ್ರಕರಣಗಳು. 44019 ಮಂದಿ ಗುಣಮುಖರಾಗಿದ್ದಾರೆ. 790 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 53355 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 5570430ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!