ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಮಂದಿಗೆ ಕೋವಿಡ್ ಸೋಂಕು

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ (ಫೆ.21) 15 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 64 ಮಂದಿ ಸೋಮವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,190 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಸೋಮವಾರ ಎರಡು ಸಾವು ಸಂಭವಿಸಿದೆ. ಒಬ್ಬರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,840 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 271 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.39ಕ್ಕೆ ಇಳಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!