ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ಮಂದಿಗೆ ಕೋವಿಡ್ ಸೋಂಕು

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ (ಫೆ.20) 14 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 53 ಮಂದಿ ಭಾನುವಾರ ಸೋಂಕು ಮುಕ್ತರಾಗಿದ್ದಾರೆ. ಈ ತನಕ ಜಿಲ್ಲೆಯಲ್ಲಿ 1,33,126 ಮಂದಿ ಕೋವಿಡ್ ಮುಕ್ತರಾಗಿದ್ದಾರೆ. ಭಾನುವಾರ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,838 ಕೋವಿಡ್ ಸಾವು ಸಂಭವಿಸಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 322 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.0.32ಕ್ಕೆ ಇಳಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!