ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ನಾಲ್ವರಲ್ಲಿ ಕೋವಿಡ್ ಸೋಂಕು ಪತ್ತೆ

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಸತತವಾಗಿ ಶೂನ್ಯಕ್ಕೆ ಇಳಿದಿದ್ದ ಕೊರೋನಾ ಸೋಂಕು ಮಂಗಳವಾರ ಮತ್ತೆ ನಾಲ್ಕು ಮಂದಿಯಲ್ಲಿ ಗೋಚರಿಸಿದೆ.
ಮಡಿಕೇರಿ ತಾಲೂಕಿನಲ್ಲಿ ಒಂದು ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ಮೂರು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.2.31ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 15 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ಈ ಹಿಂದೆ ಪತ್ತೆಯಾಗಿದ್ದ ಎಲ್ಲಾ ಪ್ರಕರಣಗಳು ಗುಣಮುಖರಾದಂತಾಗಿದೆ. ಪ್ರಸಕ್ತ ಜಿಲ್ಲೆಯಲ್ಲಿ ನಾಲ್ಕು ಸಕ್ರಿಯ ಪ್ರಕರಣಗಳಿರುವುದಾಗಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!