ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಕೆಕೆ ಅಧ್ಯಕ್ಷರ ಬದಲಾವಣೆಯಿಂದ ಆರಂಭವಾದ ಗೊಂದಲಕ್ಕೆ ಕೊನೆಗೂ ಹೈಕಮಾಂಡ್ ತೆರೆ ಎಳೆದಿದೆ.
ಕೆಪಿಸಿಸಿ ಅಧ್ಯಕ್ಷರನ್ನು ಆದಷ್ಟು ಬೇಗ ಬದಲಾಯಿಸಬೇಕು. ಇಲ್ಲವೇ ಡಿ.ಕೆ.ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುವುದಾದರೆ ಅದನ್ನು ಹೈಕಮಾಂಡ್ ಸ್ಪಷ್ಟವಾಗಿ ಹೇಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ ನೀಡಿದ್ದರು.
ಇದಾದ ಬಳಿಕ ರಾಜ್ಯ ಸಮಾವೇಶದಲ್ಲಿ ದೊಡ್ಡ ಚರ್ಚೆ ಆರಂಭವಾಯಿತು. ಕೆಸಿಪಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ಮುಕ್ತಾಯವಾಗುತ್ತಿದ್ದಂತೆಯೇ ಹೈಕಮಾಂಡ್ ಮಧ್ಯ ಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆದಿದೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷರ ರಚನೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ಕೇಳಿದ್ದಾರೆ.