August 12, 2026
Wednesday, August 12, 2026
spot_img

ಚೆನ್ನಮ್ಮ ದೇವೇಗೌಡರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಧರ್ಮಪತ್ನಿ, ಜೆಡಿಎಸ್‌ನ ಮಾತೃಶ್ರೀ ಚೆನ್ನಮ್ಮ (85) ಇಂದು (ಜು.18) ಕೊನೆಯುಸಿರೆಳೆದಿದ್ದಾರೆ.

 ಅವರ ನಿಧನಕ್ಕೆ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ಸುದೀರ್ಘ ರಾಜಕೀಯ ಏಳುಬೀಳುಗಳ ಪಯಣದಲ್ಲಿ ಸದಾ ನೆರಳಾಗಿ, ಯಶಸ್ಸಿನ ಮಹಾಶಕ್ತಿಯಾಗಿ ನಿಂತಿದ್ದರು. ಅತ್ಯಂತ ಸರಳತೆ ಮತ್ತು ಮಾತೃ ವಾತ್ಸಲ್ಯದ ಸಾಕಾರಮೂರ್ತಿಯಾಗಿದ್ದ ಅವರ ಅಗಲಿಕೆ ಇಡೀ ರಾಜ್ಯಕ್ಕೆ ದೊಡ್ಡ ನಷ್ಟ ಉಂಟುಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !