ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು: ಮಾರ್ಮಿಕವಾಗಿ ಟ್ವೀಟ್ ಮಾಡಿದ ಡಿಕೆ ಶಿವಕುಮಾರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ದೇಶಾದ್ಯಂತ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಬದಲಾವಣೆ ಕುರಿತು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದು, ಇತ್ತ ಹೊಸ ಚರ್ಚೆಗೆ ಕಾರಣವಾಗಿದೆ.

ಇದರ ನಡುವೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಎಸ್ಸಿ, ಎಸ್ಟಿ ನಾಯಕರು, ಹುದ್ದೆಗಾಗಿ ಕಾರ್ಯತಂತ್ರ ಬದಲಿಸಿದ್ದಾರೆ. ಸತೀಶ್ ಜಾರಕಿಹೊಳಿ ಎರಡು ದಿನ ದೆಹಲಿಯಲ್ಲಿ ಠಿಕಾಣಿ ಹೂಡಿ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಿ ಬಂದಿದ್ದಾರೆ. ಬಳಿಕ ಮತ್ತೋರ್ವ ಸಚಿವ ರಾಜಣ್ಣ ಎಂಟ್ರಿ ಕೊಟ್ಟಿದ್ದಾರೆ. ಮುಂದಿನ ವಾರ ಡಾ.ಪರಮೇಶ್ವರ್ ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

https://x.com/DKShivakumar/status/1889661100125286621?ref_src=twsrc%5Egoogle%7Ctwcamp%5Eserp%7Ctwgr%5Etweet

ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ. ಟಿ.ನರಸೀಪುರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿ ಗಂಗಾ ಆರತಿ ನೆರವೇರಿಸಿ, ಭಗವಂತನಲ್ಲಿ ಪ್ರಾರ್ಥಿಸಿದೆ. ಪುಣ್ಯಸ್ನಾನ ಮಾಡಿ ಭಕ್ತಿ-ಭಾವಗಳಲ್ಲಿ ಮಿಂದು ಭಾವಪರವಶನಾದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಸದ್ಯಕ್ಕೆ ಕಾಂಗ್ರೆಸ್​ನಲ್ಲಿ ಪವರ್ ಶೇರಿಂಗ್ ಗೊಂದಲಗಳು ಉದ್ಭವಿಸಿವೆ. ಇದರ ಮಧ್ಯ ಖರ್ಗೆ ಅವರು ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಇದರ ನಡುವೆ ಸಂಜೆ ಹೊತ್ತಿಗೆ ಡಿಕೆ ಶಿವಕುಮಾರ್ ಅವರು ಮಾರ್ಮಿಕ ಟ್ವೀಟ್‌ ಮಾಡಿ ಗಮನಸೆಳೆದಿದ್ದಾರೆ. ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂದು ಹೇಳಿರುವುದು ಕಾಂಗ್ರೆಸ್​ನಲ್ಲಿ ನಾನಾ ಚರ್ಚೆಗೆ ಗ್ರಾಸವಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!