ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಪುಟ ಪುನಾರಚನೆಯ ಊಹಾಪೋಹಗಳ ನಡುವೆ, ಗೃಹ ಸಚಿವ ಜಿ ಪರಮೇಶ್ವರ್ ಅವರು ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯು ನಡೆಯಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಇಂತಹ ಸಭೆಗಳಲ್ಲಿ ಪಾಲ್ಗೊಳ್ಳಲು ಸಿಎಂ ಮತ್ತು ಡಿಸಿಎಂಗೆ ಆಹ್ವಾನವಿದೆ. ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ಹೈಕಮಾಂಡ್ ಜೊತೆ ಮಾತನಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆಯೂ ಕೇಳಿ ಬಂದಿದೆ ಆದರೆ ಅದೆಲ್ಲವೂ ಸಿಎಂ ಮತ್ತು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಚಿವ ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದ ಕುರಿತು ಮಾತನಾಡಿದ ಪರಮೇಶ್ವರ ಅವರು, ಲೋಕಾಯುಕ್ತದಿಂದ ತನಿಖೆ ನಡೆಸಲಾಗುತ್ತಿದೆ. ಎಂದು ತಿಳಿಸಿದ್ದಾರೆ.