ಗಲಭೆಕೋರರಿಗೆ ಸೂಕ್ತ ಶಿಕ್ಷೆಯಾಗಲಿ: ಕೆಪಿಸಿಸಿ ಕಾಯಾ೯ಧ್ಯಕ್ಷ ಈಶ್ವರ ಖಂಡ್ರೆ ಆಗ್ರಹ

ಹೊಸದಿಗಂತ ವರದಿ, ಕಲಬುರಗಿ
ರಾಜ್ಯದಲ್ಲಿ ನಡೆಯುತ್ತಿರುವ ಗಲಭೆಗಳಿಗೆ ಸರ್ಕಾರ ಕುಮ್ಮಕ್ಕು ನೀಡುತ್ತಿದ್ದು, ಯಾರೆ ತಪ್ಪು ಮಾಡಿದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾಯಾ೯ಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದರು.
ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹುಬ್ಬಳ್ಳಿಯ ಗಲಾಟೆ ವಿಚಾರವಾಗಿ ಮಾತನಾಡಿದರು. ಪ್ರತಿಯೊಬ್ಬರು ಸಾಮರಸ್ಯ ಕಾಪಾಡಬೇಕು ಎಂದ ಅವರು, ತಮ್ಮ ತಪ್ಪು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರಗಳನ್ನು ಮುಂದೆ ತರುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕನಾ೯ಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ. ಇದಕ್ಕೆ ಬಿಜೆಪಿ ಯವರೇ ಕಾರಣವೆಂದರು. ಸಚಿವ ಈಶ್ವರಪ್ಪ ಅವರ ಹೆಸರು ಬರೆದಿಟ್ಟು, ಗುತ್ತಿಗೆದಾರರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಬೇಕಿತ್ತು.ಆದರೆ, ಸಕಾ೯ರ ಈಶ್ವರಪ್ಪ ಅವರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದರು.
ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು. ಎಂದ ಅವರು, ತನಿಖೆ ಪ್ರಾರಂಭವಾಗುವ ಮುನ್ನವೆ ಅವರು ತಪ್ಪು ಮಾಡಿಲ್ಲ ಎಂದು ಬಿಜೆಪಿ ಸಮಥಿ೯ಸಿಕೊಳ್ಳುತ್ತಿದೆ ಎಂದು ಹರಿಹಾಯ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!