Thursday, March 23, 2023

Latest Posts

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ರಕ್ತಸ್ರಾವವಾದ ಕಾರಣ ಅವರನ್ನು ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಹಲೋಕ ತ್ಯಜಿಸಿದ್ದಾರೆ. ಧ್ರುವನಾರಾಯಣ್ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಮನೆಯಲ್ಲಿಯೇ ಒಂದು ಬಾರಿ ಹಠಾತ್ ಹೃದಯಾಘಾತವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರಕ್ತಸ್ರಾವವೂ ಆಗಿದ್ದು ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರು ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದರು, ಮತದಾರರನ್ನು ಭೇಟಿ ಕೂಡ ಮಾಡುತ್ತಿದ್ದರು.

ಬೆಂಗಳೂರು ಕೃಷಿ ವಿವಿಯಲ್ಲಿ ಬಿಎಸ್‌ಸಿ ಪದವಿ ಪಡೆದಿದ್ದ ಧ್ರುವನಾರಾಯಣ್ ಅವರು 1983ರಲ್ಲಿ ಕಾರ್ಯಕರ್ತನಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಇಂದಿನ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗಳನ್ನು ಮುಂದೂಡುವ ಸಾಧ್ಯತೆಯಿದ್ದು, ಸ್ವಲ್ಪವೇ ಸಮಯದಲ್ಲಿ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರು ಮೈಸೂರಿಗೆ ಆಗಮಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!