ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾನಿಗಳ ಸಹಕಾರದೊಂದಿಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಪಿಎಸ್ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.
ಹಾವೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಮಂತರು ಮಕ್ಕಳನ್ನು ಇಂಗ್ಲಿಷ್ ಮಾಧ್ಯಮದಲ್ಲಿ ಹಾಗೂ ಬಡವರ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಲು ಬಯಸುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಗಳ ಸ್ಥಿತಿಯೂ ಶೋಚನೀಯವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆಗಳ ಪುನರುಜ್ಜಿವನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.