JOB| ಕೆಪಿಎಸ್‌ಸಿ ನೇಮಕಾತಿ: 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಮುಂಚೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 30,2023ರ ವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್‌ 31,2023ರೊಳಗೆ ಅರ್ಜಿಯನ್ನು ಹಾಕಬಹುದು.

ಪದವಿ ವಿದ್ಯಾರ್ಹತೆ ಜೊತೆಗೆ ಸೆಪ್ಟೆಂಬರ್‌ 30,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸರು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!