ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ಲೋಕಸೇವಾ ಆಯೋಗವು ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 53 ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಪದವಿ ವಿದ್ಯಾರ್ಹತೆ ಜೊತೆಗೆ ಮೇ 2,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿದಾರರು 635/-ರೂ, 2ಎ, 2ಬಿ, 3ಎ, 3ಬಿ ಮತ್ತು ಓಬಿಸಿ ಅಭ್ಯರ್ಥಿಗಳು 335/-ರೂ, ಮಾಜಿ ಸೈನಿಕ ಅಭ್ಯರ್ಥಿಗಳು 85/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 35/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮೇ 3,2023ರೊಳಗೆ ಪಾವತಿಸಬೇಕಿರುತ್ತದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 2,2023ರೊಳಗೆ ಅರ್ಜಿಯನ್ನು ಹಾಕಬಹುದು.