Friday, March 31, 2023

Latest Posts

RECRUITMENT | ಕರ್ನಾಟಕ ಲೋಕಸೇವಾ ಆಯೋಗದಲ್ಲಿ 67 ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ಲೋಕಸೇವಾ ಆಯೋಗದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ 67 ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ ವಿದ್ಯಾರ್ಹತೆ ಜೊತೆಗೆ ಏಪ್ರಿಲ್‌ 25,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 21,400/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿದಾರರು 635/-ರೂ, ಪ್ರವರ್ಗ-2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳು 335/-ರೂ, ಮಾಜಿ ಸೈನಿಕ ಅಭ್ಯರ್ಥಿಗಳು 85/-ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 35/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಏಪ್ರಿಲ್‌ 25,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!