August 22, 2026
Saturday, August 22, 2026
spot_img

ಕೆಪಿಎಸ್‌ಸಿ ನೇಮಕಾತಿ ಹಗರಣ: IAS ಅಧಿಕಾರಿ ನಾಪತ್ತೆ ಸುದ್ದಿ ಕುರಿತು ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇದೀಗ ಚರ್ಚೆಯಲ್ಲಿರೋ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ರಾಜ್ಯದ ಹಲವು ಕಡೆಗಳಲ್ಲಿ ಶೋಧ ನಡೆಸಿದ್ದಾರೆ.

ಈ ಪ್ರಕರಣದ ಅವಧಿಯಲ್ಲಿ ಕೆಪಿಎಸ್‌ಸಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಕುರಿತು ಹರಿದಾಡುತ್ತಿದ್ದ ‘ನಾಪತ್ತೆ’ ಸುದ್ದಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಅಧಿಕಾರಿ ನಾಪತ್ತೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ತಂದೆಯ ಅನಾರೋಗ್ಯದಿಂದ ಊರಿಗೆ ತೆರಳಿದ್ದಾರೆ

ಜ್ಞಾನೇಂದ್ರ ಕುಮಾರ್ ಅವರೊಂದಿಗೆ ತಾವೇ ನೇರವಾಗಿ ಮಾತನಾಡಿರುವುದಾಗಿ ಹೇಳಿದ ಪ್ರಿಯಾಂಕ್ ಖರ್ಗೆ, ಅವರ ತಂದೆಗೆ ಅನಾರೋಗ್ಯವಾಗಿರುವ ಕಾರಣ ಉತ್ತರ ಪ್ರದೇಶದಲ್ಲಿರುವ ಸ್ವಗ್ರಾಮಕ್ಕೆ ತೆರಳಿದ್ದಾರೆ. ಇನ್ನೆರಡು ದಿನಗಳಲ್ಲಿ ವಾಪಸ್ ಬರುವುದಾಗಿ ತಿಳಿಸಿದ್ದಾರೆ ಹೀಗಾಗಿ ಅವರು ನಾಪತ್ತೆಯಾಗಿದ್ದಾರೆ ಎಂಬ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ:

ತನಿಖೆಗೆ ಸಹಕರಿಸುವುದಾಗಿ IAS ಅಧಿಕಾರಿ

ಜ್ಞಾನೇಂದ್ರ ಕುಮಾರ್ ಈ ಹಿಂದೆ ಕೆಪಿಎಸ್‌ಸಿಯಲ್ಲಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಪ್ರಸ್ತುತ ನಡೆಯುತ್ತಿರುವ ತನಿಖೆಯ ಹಿನ್ನೆಲೆಯಲ್ಲಿ ಅವರ ಹೆಸರು ಪ್ರಸ್ತಾಪವಾಗಿದೆ. ಆದರೆ ಅವರ ವಿರುದ್ಧ ಯಾವುದೇ ಪ್ರಕರಣ ಅಥವಾ ಆರೋಪವಿಲ್ಲ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಒಂದು ವೇಳೆ ತನಿಖಾ ಸಂಸ್ಥೆಗಳು ವಿಚಾರಣೆಗೆ ಕರೆದರೆ ಅದಕ್ಕೆ ಸಂಪೂರ್ಣ ಸಹಕಾರ ನೀಡಲು ಜ್ಞಾನೇಂದ್ರ ಕುಮಾರ್ ಸಿದ್ಧರಾಗಿದ್ದಾರೆ. ತನಿಖೆ ನಡೆಯುವುದರಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ಅವರು ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !