ಕೆಪಿಎಸ್‌ಸಿ ನೇಮಕಾತಿ ಆಯ್ಕೆ ಪಟ್ಟಿಯ ಫೈಲ್‌ ಮಿಸ್ಸಿಂಗ್‌! ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನೇಮಕಾತಿಯ ಆಯ್ಕೆ ಪಟ್ಟಿಯ ಇಡೀ ಫೈಲ್‌ ನಾಪತ್ತೆಯಾಗಿದೆ. ಈ ಬಗ್ಗೆ ಆಯೋಗದ ಅಧಿಕಾರಿಗಳು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

2016ರಲ್ಲಿ ಕರ್ನಾಟಕ ಕೊಳಗೇರಿ ಮಂಡಳಿ ಕಿರಿಯ ಇಂಜಿನಿಯರ್​​ಗಳ ನೇಮಕಾತಿ ಆಗಿತ್ತು. 2018ರಲ್ಲಿ‌ ಹೆಚ್ಚುವರಿ ಆಯ್ಕೆ ಪಟ್ಟಿಯನ್ನ ಪ್ರಕಟಿಸಲಾಗಿತ್ತು. ಇದನ್ನ ಪ್ರಶ್ನಿಸಿ ವಿವೇಕಾನಂದ ಹೆಚ್.ಡಿ ಎಂಬುವರು ಹೈಕೋರ್ಟ್​​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ನ್ಯಾಯಾಲಯದ ಆದೇಶದಂತೆ ಕೆಪಿಎಸ್​ಸಿ ಗೌಪ್ಯ ಶಾಖೆ-3ಯು ಆಯ್ಕೆ ಪಟ್ಟಿ ಕಡತನ್ನು ಸಿದ್ಧಪಡಿಸಿತ್ತು. ಬಳಿಕ 2024ರಲ್ಲಿ ಜನವರಿ 22ರಂದು‌ ಕೆಪಿಎಸ್​ಸಿ ಆಪ್ತ ಕಾರ್ಯದರ್ಶಿ ಅವರಿಗೆ ಸಲ್ಲಿಸಲಾಗಿತ್ತು. ಆ ಬಳಿಕ ಕಡತ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ಆಯೋಗದ ಸಹಾಯಕ ಅಧಿಕಾರಿ ರಾಘವೇಂದ್ರ ಅವರು ಉಲ್ಲೇಖಿಸಿದ್ದಾರೆ.

ಕಣ್ಮರೆಯಾಗಿರುವ ಕಡತವು ಆಕಸ್ಮಿಕವಾಗಿ ಆಯೋಗದ ಬೇರೆ ಶಾಖೆಗಳಿಗೆ ಹೋಗಿರುವ ಸಾಧ್ಯತೆಯಿದ್ದು, ಈ ಸಂಬಂಧ ಎಲ್ಲಾ ಶಾಖೆಗಳಿಗೆ ಕಡತ ಶೋಧಿಸುವಂತೆ ಜ್ಞಾಪನ ಪತ್ರ ಹೊರಡಿಸಲಾಗಿತ್ತು. ನಿರಂತರವಾಗಿ ಪರಿಶೀಲನೆ ನಡೆಸಿದರೂ ಕಡತ ಸಿಗದಿರುವ ಬಗ್ಗೆ ಆಯಾ ಶಾಖೆಗಳ ಅಧಿಕಾರಿಗಳು ಉತ್ತರಿಸಿದ್ದರು.

ಈ ಹಿನ್ನೆಲೆಯಲ್ಲಿ ಅಧಿಕಾರಿ ಹಾಗೂ‌ ಸಿಬ್ಬಂದಿಯೊಳಗೊಂಡ ತಂಡ ರಚಿಸಿ ಎಲ್ಲಾ ಶಾಖೆಗಳಿಗೂ ತೆರಳಿ ಪರಿಶೀಲಿಸಿತ್ತು. ಆಗಲೂ ಕಡತ ಸಿಗದ ಪರಿಣಾಮ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!