ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ ಮೊದಲ ವಾರದಲ್ಲಿ ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್ ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಇಂದು ತಿಳಿಸಿದರು.
ವಿಧಾನ ಸಭೆಯಲ್ಲಿ ಶೂನ್ಯವೇಳೆಯಲ್ಲಿ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಾರದೊಳಗೆ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ 5 ತಿಂಗಳ ಹಿಂದೆಯೇ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ. ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ,ಜನವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.