ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನ ರೈತರ ಜಾತ್ರೆ: ಕೃಷಿ ಮೇಳಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳ ನಡೆಯಲಿದ್ದು, ಈ ಮೇಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದು ಕೃಷಿ ಮೇಳವನ್ನು ಅತ್ಯಂತ ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ. ಕೃಷಿ ಮೇಳಕ್ಕೆ ಬರಲು ಆಗಲ್ಲ ಎಂದಿದ್ದೆ. ಆದರೆ ಮೈಸೂರಿನ ಕಾರ್ಯಕ್ರಮವನ್ನು ಮುಂದಕ್ಕೆ ಹಾಕಿಸಿ ಕೃಷಿಮೇಳಕ್ಕೆ ಬರುವಂತೆ ಕೃಷಿ ಸಚಿವರು ಒತ್ತಾಯಿಸಿದರು. ನಾನಿಂದು ಸಂತೋಷದಿಂದ ಇಲ್ಲಿ ಭಾಗಿಯಾಗಿದ್ದೇನೆ ಎಂದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಸ್ಥಾಪನೆಯಾದ ಮೊದಲ ವಿಶ್ವ ವಿದ್ಯಾಲಯ. ವಿಶ್ವವಿದ್ಯಾಲಯದಲ್ಲಿ ಏನೆಲ್ಲ ತಂತ್ರಜ್ಞಾನ ಇರುತ್ತೆ? ನೀರಿನ ಸಂರಕ್ಷಣೆ ಹೇಗೆ ? ಭೂಮಿ ಫಲವತತ್ತೆ ಕಾಪಾಡುವುದು ಹೇಗೆ ? ಎಂಬ ವಿಷಯವನ್ನ ತಿಳಿಸುವ ಕೆಲಸ ವಿಶ್ವವಿದ್ಯಾನಿಲಯ ಮಾಡುತ್ತದೆ. ರಾಜ್ಯದ ಹೆಚ್ಚಿನ ಜನರು ಕೃಷಿ ಮೇಲೆ ಅವಲಂಬಿತದ್ದಾರೆ. ಹೀಗಾಗಿ ಈ ಕೃಷಿ ಮೇಳ ಇನ್ನಷ್ಟು ಸಹಕಾರಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಕೃಷಿ ಮೇಳದಲ್ಲಿ ಹೊಸ ತಳಿಗಳ ಬಗ್ಗೆ ಮಾಹಿತಿ ಪಡೆದರು. ಅವರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸಾಥ್ ನೀಡಿದರು.

ಕೃಷಿ ಮೇಳ 2023

ಈ ಬಾರಿಯ ಕೃಷಿ ಮೇಳವು ʼಆಹಾರ, ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯಗಳುʼ ಎಂಬ ಘೋಷವಾಕ್ಯದಡಿ ನವೆಂಬರ್ 20ರ ವರೆಗೆ ನಡೆಯಲಿದೆ.

ಈ ಬಾರಿ ಕೃಷಿ ಮೇಳದಲ್ಲಿ ʼಬೀಜ ಸಂತೆʼ ಆಯೋಜಿಸಲಾಗುತ್ತಿದೆ. ಬಿತ್ತನೆ ಬೀಜಗಳ ಪ್ರದರ್ಶನದ ಜೊತೆಗೆ ಮಾರಾಟಕ್ಕೂ ಅವಕಾಶ ನೀಡಲಾಗುತ್ತಿದೆ. ಅಲ್ಲದೆ ಈ ಬಾರಿಯ ಕೃಷಿ ಮೇಳದಲ್ಲಿ ಬರ ಸ್ನೇಹಿ ಕೃಷಿ ತಂತ್ರಜ್ಞಾನಗಳು ಮತ್ತು ಸಿರಿಧಾನ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಮೇಳದಲ್ಲಿ ವಿಭಿನ್ನ ಬಗೆಯ ಪ್ರಾಣಿ, ಪಕ್ಷಿಗಳ ಪ್ರದರ್ಶನವೂ ಇರಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!