ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಸಿಗಳು, ತಹಶೀಲ್ದಾರರು ಕಡ್ಡಾಯವಾಗಿ ಇನ್ನು ಮುಂದೆ ಜನರಿಗೆ ಸಿಗಬೇಕು. ಜನರ ಆಶಯಗಳ ವಿರುದ್ಧ ಅಧಿಕಾರಿಗಳು ನಡೆದುಕೊಂಡ್ರೆ ಅಂತಹ ಅಧಿಕಾರಿಗಳ ಮೇಲೆ ಕೇಸ್ ದಾಖಲು ಮಾಡೋದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ಭೂ ಸುರಕ್ಷಾ ಯೋಜನೆಯಲ್ಲಿ ಹಿಂದೆ ಬಿದ್ದಿದ್ದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸಿಗಳು, ತಹಶೀಲ್ದಾರರು, ಶಿರಸ್ತೇದಾರರ ಸಭೆಯನ್ನು ಶುಕ್ರವಾರ ಸಚಿವರು ನಡೆಸಿದರು. ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಚಿವರು ಜನರ ಆಶಯದಂತೆ ಕೆಲಸ ಮಾಡಬೇಕು ಎಂದು ಎಚ್ಚರಿಸಿದ್ದಾರೆ.