ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಸ್ಥಳ ನಿರ್ವಹಣಾ ವಿವಾದ ಕುರಿತ ಪ್ರಕರಣದ ಕುರಿತು ಅಲಹಾಬಾದ್ ಹೈಕೋರ್ಟ್‌ ತನ್ನ ತೀರ್ಪನ್ನು ಶುಕ್ರವಾರ ಕಾಯ್ದಿರಿಸಿದೆ.

ಕೃಷ್ಣ ಮಂದಿರಕ್ಕೆ ಹೊಂದಿಕೊಂಡಿರುವ ಶಾಹಿ ಈದ್ಗಾ ಮಸೀದಿ ತೆರವು ಕೋರಿ ಹಲವು ಅರ್ಜಿಗಳನ್ನು ಸಲ್ಲಿಕೆಯಾಗಿದ್ದವು.

ಪೂಜಾ ಸ್ಥಳ ಕುರಿತು 1991ರ ವಿಶೇಷ ಅವಕಾಶ ಕಾಯ್ದೆ ಅಡಿಯಲ್ಲಿ ಸಲ್ಲಿಕೆಯಾದ ಅರ್ಜಿಗಳು ಅನರ್ಹ. ಈ ಕಾಯ್ದೆಯಡಿ ಯಾವುದೇ ಪೂಜಾ ಸ್ಥಳದ ಪರಿವರ್ತನೆಯನ್ನು ನಿಷೇಧಿಸಿದೆ. ಜತೆಗೆ 1947ರ ಆ. 15ಕ್ಕೆ ಸಂಬಂಧಿಸಿದಂತೆ ಅಸ್ಥಿತ್ವದಲ್ಲಿರುವ ಅಂಥ ಧಾರ್ಮಿಕ ಸ್ಥಳಗಳ ಸ್ವರೂಪವನ್ನು ಕಾಪಾಡಬೇಕು ಎಂದು ಮುಸ್ಲಿಂ ಪರ ವಕೀಲರು ಪೀಠದ ಮುಂದೆ ವಾದ ಮಂಡಿಸಿದರು.

ಪ್ರಕರಣದ ವಾದ ಮತ್ತು ಪ್ರತಿವಾದವನ್ನು ಆಲಿಸಿದ ನ್ಯಾ. ಮಯಾಂಕ್ ಕುಮಾರ್ ಜೈನ್ ಅವರು, ತೀರ್ಪನ್ನು ಕಾಯ್ದರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!